Home ಶಿವಮೊಗ್ಗಶಾಸಕರ ಸತತ ಹೋರಾಟಕ್ಕೆ ಸಿಕ್ಕ ಪ್ರತಿಫಲ..! ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಸಿಕ್ಕ ಜಯ!.ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ….!

ಶಾಸಕರ ಸತತ ಹೋರಾಟಕ್ಕೆ ಸಿಕ್ಕ ಪ್ರತಿಫಲ..! ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಸಿಕ್ಕ ಜಯ!.ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ….!

by EDITOR NEWS WARRIORS
0 comments

ಆಶ್ರಯ ಯೋಜನೆಯ ಮನೆಗಳನ್ನು ಹಸ್ತಾಂತರಿಸಲು ದಿನಾಂಕ 28.01.2025 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಜಮೀರ್ ಅಹ್ಮದ್!!

ಶಿವಮೊಗ್ಗದ ಗೋವಿಂದಾಪುರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ ಪ್ರಧಾನ ಮಂತ್ರಿ ಆಶ್ರಯ ಯೋಜನೆ ಅಡಿಯಲ್ಲಿ ಈಗಾಗಲೇ ನಿರ್ಮಾಣಗೊಂಡು ಫಲಾನುಭವಿಗಳಿಗೆ ಹಸ್ತಾಂತರಿಸಲು ಸಿದ್ಧವಾಗಿರುವ 652 ಮನೆಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಜಮೀರ್ ಅಹ್ಮದ್ ಅವರನ್ನು ಕಳೆದವಾರ ಭೇಟಿಯಾಗಿ, ಮನೆಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮನೆಗಳಲ್ಲಿ ಇರುವಂತಹ ನೀರಿನ ಹಾಗೂ ವಿದ್ಯುತ್ ಸಮಸ್ಯೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿ, ಜನವರಿ 18ರಂದು ಹಸ್ತಾಂತರ ಪ್ರಕ್ರಿಯೆಯನ್ನು ನಡೆಸಲು ಈ ಮೊದಲೇ ನಿಗದಿಪಡಿಸಲಾಗಿತ್ತು.

ಆದರೆ ಕೇಂದ್ರ ಸಚಿವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಆಗ ಮತ್ತೊಂದು ದಿನ ಶಿವಮೊಗ್ಗ ನಗರಕ್ಕೆ ಖಂಡಿತಾ ಆಗಮಿಸುವುದಾಗಿ ಸಚಿವರು ತಿಳಿಸಿದ್ದರೂ, ಆದರೆ ಸತತ ಪರಿಶ್ರಮದ ಫಲವಾಗಿ ದಿನಾಂಕ 28.01.2025ರ ಮಂಗಳವಾರದಂದು ಶಿವಮೊಗ್ಗ ನಗರಕ್ಕೆ ಆಗಮಿಸುವುದಾಗಿ ಇಂದು ಸಚಿವರಾದ ಜಮೀರ್ ಅಹ್ಮದ್ ಅವರು ದೂರವಾಣಿ ಮೂಲಕ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ನವರಿಗೆ ತಿಳಿಸಿದ್ದು, ಅವರ ಉಪಸ್ಥಿತಿಯಲ್ಲಿ ಮನೆಗಳ ಹಸ್ತಾಂತರ ಪ್ರಕ್ರಿಯೆಯು ನಡೆಯಲಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...