Home ರಾಜ್ಯಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್..! ‘ಮೇ’ ಗೆ ಎಲೆಕ್ಷನ್ ‘ಇವಿಎಂ’ ಯಂತ್ರಕ್ಕೆ ಫುಲ್ ಸ್ಟಾಪ್ ಸಾಧ್ಯತೆ..?!

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್..! ‘ಮೇ’ ಗೆ ಎಲೆಕ್ಷನ್ ‘ಇವಿಎಂ’ ಯಂತ್ರಕ್ಕೆ ಫುಲ್ ಸ್ಟಾಪ್ ಸಾಧ್ಯತೆ..?!

by EDITOR NEWS WARRIORS
0 comments

ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆಗಳಿಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು ಇದೇ ವರ್ಷದ ಮೇ ತಿಂಗಳಿನಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಡೆಸುವ ಸಾಧ್ಯತೆಯಿದೆ.

ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ‌ಚುನಾವಣೆ ನಡೆಸಲು ಚರ್ಚೆ ನಡೆಯುತ್ತಿದೆ ಎಂದು ರಾಜ್ಯ‌ ಚುನಾವಣಾ ಆಯೋಗದ ಆಯುಕ್ತ ‌ಜಿ.ಎಸ್ ಸಂಗ್ರೇಶಿ ತಿಳಿಸಿದ್ದಾರೆ.


ಬೆಳಗಾವಿಯಲ್ಲಿ ಈ ಸಂಬಂಧವಾಗಿ ಮಾತನಾಡಿದ ಸಂಗ್ರೇಶಿ, ಚುನಾವಣೆ ವಿಳಂಬವಾಗಲು ಕಾರಣವನ್ನು ತಿಳಿಸುತ್ತಾ ಜಿಲ್ಲಾ ಪುನರ್ ವಿಂಗಡಣಾ ವರದಿ ಪಡೆಯುವುದು ಸೇರಿದಂತೆ ವಿವಿಧ ಕಾರಣಕ್ಕಾಗಿ ಚುನಾವಣೆ ಸ್ವಲ್ಪ ಸಮಯ ವಿಳಂಬವಾಗಿದೆ ಆದರೆ ಹಾಗಾಗಿ ಏಪ್ರಿಲ್ ತಿಂಗಳಲ್ಲಿ ಚುನಾವಣೆ ಘೋಷಣೆ ಮಾಡಿ ಮೇ ತಿಂಗಳಲ್ಲಿ ಚುನಾವಣೆ ನಡೆಸುವುದು ಬಹುತೇಕ ಖಚಿತ ಎಂದಿದ್ದಾರೆ.

ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಮೀಸಲಾತಿ ಪಟ್ಟಿ ನೀಡಲು ಸೂಚಿಸಲಾಗಿದ್ದು. ಆ ಮೀಸಲಾತಿ ಪಟ್ಟಿ ಸಿಕ್ಕ ತಕ್ಷಣ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣಾ ವೇಳಾ ಪಟ್ಟಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಸಿದ್ಧಪಡಿಸಲು ಸಕಲಸಿದ್ಧತೆ :

18 ವರ್ಷ ತುಂಬಿದ ಎಲ್ಲಾ ಯುವಕ, ಯುವತಿರನ್ನು ಮತದಾರ ಪಟ್ಟಿಗೆ ಸೇರ್ಪಡೆ ಮಾಡಲು ಸಿದ್ಧತೆ ನಡೆದಿದ್ದು ಈಗಾಗಲೇ ಸಂಬಂಧಪಟ್ಟವರಿಗೆ ಇದರ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.

ಇವಿಎಂ ಯಂತ್ರದ ಬದಲು ಬ್ಯಾಲೆಟ್ ಪೇಪರ್ ಬಳಕೆ ಸಾಧ್ಯತೆ :

ಇವಿಎಂ ಯಂತ್ರದ ಮೇಲೆ ವಿವಿಧ ರಾಜಕೀಯ ಪಕ್ಷಗಳು ಸೇರಿದಂತೆ ಮತದಾರರಿಗೂ ಕೂಡ ಅನುಮಾನವಿದೆ ಹಾಗಾಗಿ ಇವಿಎಂ ಹ್ಯಾಕ್ ಬಗ್ಗೆ ಪ್ರಾತ್ಯಕ್ಷಿಕವಾಗಿ ಪರೀಕ್ಷೆ ನಡೆಸಬೇಕು ಸಾರ್ವಜನಿಕರಲ್ಲಿ ಹಾಗೂ ರಾಜಕಾರಣಿಗಳಲ್ಲಿ ಇರುವ ಸಂಶಯ ನಿವಾರಿಸಬೇಕು. ಈ ಬಾರಿ ಜನರಲ್ಲಿನ ಸಂಶಯ ನಿವಾರಿಸಲು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಯಾತಿ ಚುನವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುವುದು ಎಂದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...