Home ರಾಜ್ಯಶಿವಮೊಗ್ಗಕ್ಕೆ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಕೆ ಎನ್ ಪಣೀಂದ್ರ ಮಹತ್ವದ ಬೇಟಿ..!

ಶಿವಮೊಗ್ಗಕ್ಕೆ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಕೆ ಎನ್ ಪಣೀಂದ್ರ ಮಹತ್ವದ ಬೇಟಿ..!

by EDITOR NEWS WARRIORS
0 comments


ಕರ್ನಾಟಕ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ .ಕೆ.ಎನ್.ಫಣೀಂದ್ರ ಅವರು ಮಾರ್ಚ್18ರಿಂದ 21ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.


ಮಾರ್ಚ್18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾರ್ಚ್19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಂದು ಸಂಜೆ 5.30ರಿಂದ 6.30ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಿಕ್ಷಣ ಇಲಾಖೆ, ರೇಷ್ಮೇ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳಿಗಾಗಿ ಏರ್ಪಡಿಸಲಾಗುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.


ಮಾರ್ಚ್20ರಂದು ಬೆಳಿಗ್ಗೆ 9.45 ರಿಂದ 10.45ರವರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನಕ್ಕೆ ಭೇಟಿ ನೀಡಿ, ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಮತ್ತು ಆಡಳಿತ ನೀಡುವಲ್ಲಿ ವಕೀಲರ ಪಾತ್ರ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವರು.

ಬೆಳಿಗ್ಗೆ 11ರಿಂದ 11.30ರವರೆಗೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಪ್ರತಿವಾದಿಗಳನ್ನು ಉದ್ದೇಶಿಸಿ ಮಾತನಾಡುವರು. ಅಲ್ಲದೇ ಸಾರ್ವಜನಿಕರು ಸಲ್ಲಿಸಿದ ದೂರುಗಳು ಮತ್ತು ಕುಂದು-ಕೊರತೆಗಳ ಪರಿಹಾರಕ್ಕಾಗಿ ಅಗತ್ಯ ಕ್ರಮಕೈಗೊಳ್ಳುವರು.


ಮಾರ್ಚ್21ರಂದು ಬೆಳಿಗ್ಗೆ 9ರಿಂದ 10ರವರೆಗೆ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಜಿಲ್ಲೆಯ ಶಿವಮೊಗ್ಗ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿನ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವರು. ಅಂದು ಸಂಜೆ 6 ರಿಂದ 7ರವರೆಗೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ಪಾತ್ರ ಎಂಬ ವಿಷಯದ ಕುರಿತು ನ್ಯಾಯಾಧೀಶರೊಂದಿಗೆ ಸಂವಾದ ನಡೆಸುವರು.


ರಾತ್ರಿ 11ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹಿಂದಿರುಗುವರು.ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಮಾರ್ಚ್18-21ರವರೆಗೆ ಕರ್ನಾಟಕ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ .ಕೆ.ಎನ್.ಫಣೀಂದ್ರರವರ ಭೇಟಿ ಮಹತ್ವ ಪಡೆದುಕೊಂಡಿದೆ….

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...