Home ಶಿವಮೊಗ್ಗಆರೋಗ್ಯಮಲೆನಾಡಿನಲ್ಲಿ ಮಂಗನ ಕಾಯಿಲೆಯ ಆರ್ಭಟ ಎಂಟು ವರ್ಷದ ಪುಟ್ಟ ಬಾಲಕ ಮಂಗನ ಕಾಯಿಲೆಗೆ ಬಲಿಯಾದನೇ..?!

ಮಲೆನಾಡಿನಲ್ಲಿ ಮಂಗನ ಕಾಯಿಲೆಯ ಆರ್ಭಟ ಎಂಟು ವರ್ಷದ ಪುಟ್ಟ ಬಾಲಕ ಮಂಗನ ಕಾಯಿಲೆಗೆ ಬಲಿಯಾದನೇ..?!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಎಂಟು ವರ್ಷದ ಪುಟ್ಟ ಬಾಲಕ ಮಂಗನ ಕಾಯಿಲೆಗೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಸುಮಾರು 12 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ತೀರ್ಥಹಳ್ಳಿಯ ಕೋಣಂದೂರು ಸಮೀಪದ ದತ್ತರಾಜಪುರ ಎನ್ನುವ ಹಳ್ಳಿಯ ರಚಿತ್ ಎನ್ನುವ ಎಂಟು ವರ್ಷದ ಪುಟ್ಟ ಬಾಲಕನೇ ಮೃತ ದುರ್ದೈವಿ ಆಗಿದ್ದಾನೆ.

ಕಳೆದ 12 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ತೀವ್ರವಾದ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರನ್ನು ಪರೀಕ್ಷೆಯ ಒಳಪಡಿಸಿದಾಗ ಸಹೋದರನಿಗೆ ಮೊದಲು ಕೆಎಫ್ ಡಿ ಪಾಸಿಟಿವ್ ಬಂದಿದೆ. ಆದರೆ ರಜತ್ ಗೆ ನಾರ್ಮಲ್ ಎಂದು ವರದಿ ಬಂದಿತ್ತು ನಂತರ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ

ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚೇತರಿಸಿಕೊಂಡ ಸಹೋದರಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ರಚಿತ್ ಚಿಕಿತ್ಸೆ ಫಲಿಸದೆ ನಿನ್ನೆ ತಡರಾತ್ರಿ 8:30ರ ವೇಳೆಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕುಟುಂಬಗಳ ಮಾಹಿತಿಯ ಪ್ರಕಾರ ಇಬ್ಬರು ಮಕ್ಕಳು ಶಾಲೆ ಬಿಟ್ಟರೆ ಮನೆಗೆ ಬರುತ್ತಿದ್ದರೆ ವಿನಃ ಕಾಡಿಗೆ ಹೋದ ಬಗ್ಗೆ ಗೊತ್ತಿಲ್ಲ ಹೇಗೆ ಅವರಿಗೆ ಮಂಗನ ಕಾಯಿಲೆ ಬಂತು ಎನ್ನುವುದೇ ಗೊತ್ತಾಗುತ್ತಿಲ್ಲ ಎನ್ನುತ್ತಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ವೈದ್ಯಾಧಿಕಾರಿಗಳಾದ ಡಾಕ್ಟರ್ ನಟರಾಜ್ ಅವರು ಪತ್ರಿಕೆ ಜೊತೆ ಮಾತನಾಡಿ ಈ ಪ್ರಕರಣ ನಿನ್ನೆ ತಡರಾತ್ರಿ ನಡೆದಿದೆ ಆದರೆ ಇದು ಶಂಕಿತ ಪ್ರಕರಣವಾಗಿದ್ದು ಪುಣೆಗೆ ಸ್ಯಾಂಪಲ್ ಕಳಿಸಿದ್ದೇವೆ ಅಲ್ಲಿಂದ ವರದಿ ಬಂದ ನಂತರವೇ ದೃಢಪಡುವುದು ಆರೋಗ್ಯ ಇಲಾಖೆಯಿಂದ ಎಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತಿದ್ದೇವೆ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎನ್ನುತ್ತಾರೆ.

ತೀರ್ಥಹಳ್ಳಿ ತಾಲೂಕಿಗೆ ಸಂಬಂಧಿಸಿದಂತೆ ಇದು ಎರಡನೇ ಪ್ರಕರಣವಾಗಿದೆ ಹಿಂದೆ ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆ ಕೆಎಫ್‌ಡಿ ಸೋಂಕಿನಿಂದ ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಸಾವನ್ನಪ್ಪಿದ್ದರು.

ಒಟ್ಟಿನಲ್ಲಿ ಮಲೆನಾಡಿನಲ್ಲಿ ಮಂಗನ ಕಾಯಿಲೆಯ ಆರ್ಭಟ ಮತ್ತೆ ಶುರುವಾಗಿದೆ. ಇತಿಹಾಸದ ಪುಟ ಸೇರಿರುವ ಕಾಯಿಲೆಗೆ ಯಾವುದೇ ಸರ್ಕಾರಗಳು ಬಂದರೂ ಸರಿಯಾದ ಚಿಕಿತ್ಸೆಯ ಕ್ರಮ ಸಿಕ್ಕಿಲ್ಲ ಎನ್ನುವುದೇ ದುರಂತ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...