Home ಬೆಳಗಾವಿಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಗಾಗಿ ಅರ್ಜಿ ಆಹ್ವಾನ..!

ಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಗಾಗಿ ಅರ್ಜಿ ಆಹ್ವಾನ..!

by EDITOR NEWS WARRIORS
0 comments

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ ಬೆಳಗಾವಿ/ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಿದ್ದು,

21 ರಿಂದ 30 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯು.ಜಿ.ಸಿ.ಯಿಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಪಡೆದಿರಬೇಕು. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 8.00 ಲಕ್ಷಕ್ಕಿಂತ ಮೀರಿರಬಾರದು. ಪುರುಷರು ಕನಿಷ್ಠ ಎತ್ತರ 168 ಸೆಂ.ಮೀ, ತೂಕ 50 ಕೆ.ಜಿ ಹಾಗೂ ಎದೆಯ ಸುತ್ತಳತೆ 76 ಸೆಂ.ಮಿ. ಇರಬೇಕು ಮತ್ತು ಮಹಿಳೆಯರು ಕನಿಷ್ಠ 157 ಸೆಂ.ಮೀ. ಎತ್ತರ, 45 ಕೆ. ಜಿ. ತೂಕವಿರಬೇಕು. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆಸಕ್ತರು ವೆಬ್‌ಸೈಟ್ https://sevasinduservices.karnataka.gov.in/sevasindhu/departmentservices, https://dom.karnatka.gov.in ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಗಳನ್ನು ಸಂಪರ್ಕಿಸುವುದು. ————–

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...