Home ರಾಜ್ಯಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..!

ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..!

by EDITOR NEWS WARRIORS
0 comments

ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..!
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, (ಅರಿವು ಶೈಕ್ಷಣಕ ಸಾಲ ಯೋಜನೆ ನವೀಕರಣ), ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ), ಮರಾಠ ಮಿಲ್ಟ್ರೀ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮತ್ತು ಇದರ ಉಪ ಸಮುದಾಯಗಳನ್ನು ಹೊರತು ಪಡಿಸಿ) ಮರಾಠ ಸಮುದಾಯದ ಜನರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡಿಂಗ್ ಮಾಡಿಸಿರಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. 2023-24 ಮತ್ತು 2024-25 ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಜುಲೈ 4 ರೊಳಗಾಗಿ ಸಲ್ಲಿಸುವುದು. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ).
ಹೆಚ್ಚಿನ ಮಾಹಿತಿಗಾಗಿ https://kmcdc.karnataka.gov.in ಹಾಗೂ ನಿಗಮದ ಸಹಾಯವಾಣಿ ಮೊ.ನಂ. 8867537799 ದೂ.ಸಂ.080-29903994 ಗಳನ್ನು ಸಂಪರ್ಕಿಸಬಹುದು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...