Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ :ಮುಂಜಾಗರೂಕತೆಯಿಂದ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ : ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಕೆ ಎಸ್..!

ತೀರ್ಥಹಳ್ಳಿ :ಮುಂಜಾಗರೂಕತೆಯಿಂದ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ : ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಕೆ ಎಸ್..!

by EDITOR NEWS WARRIORS
0 comments

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶ್ರೀ ಜೆ ಸಿ ಆಸ್ಪತ್ರೆಯಲ್ಲಿ
ತೀರ್ಥಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧ ಹಾಸ್ಟೆಲ್ ಗಳ ವಾರ್ಡನ್ ಮತ್ತು ಸಿಬ್ಬಂದಿಗಳಿಗೆ ಕೀಟ ಜನ್ಯ ರೋಗಗಳ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ ಟಿ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಾಗಾರದ ಉದ್ದೇಶಗಳ ಬಗ್ಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಜಿಲ್ಲಾ ಎನ್ ವಿ ಬಿ ಡಿ ಸಿ ಪಿ ಕಚೇರಿಯ ಪ್ರಭಾರ ಮೇಲ್ವಿಚಾರಕ ನಾರಾಯಣ್ ಮಾತನಾಡಿ, ಕೀಟಜನ್ಯ ರೋಗಗಳ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳು ನಿಯಂತ್ರಣ ಕ್ರಮಗಳು, ರೋಗ ಲಕ್ಷಣಗಳು ಮತ್ತು‌  ಚಿಕಿತ್ಸೆಗಳ ಬಗ್ಗೆ ವಿವರವಾಗಿ ತಿಳಿಸಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳು ಸಾಂಕ್ರಾಮಿಕ ರೋಗ‌ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪ್ರಕಾಶ್ ಕೆ ಎಸ್ ಮಾತನಾಡಿ, ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ತಡೆಗಟ್ಟುವುದೇ ಮುಖ್ಯ. ಅಗತ್ಯ ಮುಂಜಾಗರೂಕತೆ ವಹಿಸುವುದರಿಂದ‌ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾಗರೂಕತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದೆ. ರೋಗ ನಿಯಂತ್ರಣಕ್ಕೆ ಇಲಾಖೆಯೊಂದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಆ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರ ಇರಲಿ ಎಂದರು.
ಜಿಲ್ಲಾ ಎನ್ ವಿ ಬಿ ಡಿ ಸಿ ಪಿ ಕಚೇರಿಯ ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ರಾಜು, ಆರೊಗ್ಯ ನಿರೀಕ್ಷಣಾಧಿಕಾರಿ ಧೀರೇಂದ್ರ ಸೇರಿದಂತೆ  ತಾಲ್ಲೂಕಿನ ವಿವಿಧ ಹಾಸ್ಟೇಲ್, ವಸತಿ ಶಾಲೆಗಳ ವಾರ್ಡನ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿ ಹನುಮಂತ ರೆಡ್ಡಿ ಸ್ವಾಗತಿಸಿ, ಸಂಜನಾ ವಂದಿಸಿದರು.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!